ರಷ್ಯಾ-ಉಕ್ರೇನ್ ಯುದ್ಧ ಬಿಕ್ಕಟ್ಟು-ರಷ್ಯಾ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ..?
ದೆಹಲಿ: ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ಕರೆದರು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗುಯಾಗಿದ್ರು. ಉಕ್ರೇನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯ ಕುರಿತು ವಿದೇಶಾಂಗ ಇಲಾಖೆಯು ಪ್ರಧಾನಿ ಮೋದಿಯವರಿಗೆ ವಿವರಣೆ ನೀಡಿದ್ರು. ಹಂಗೇರಿಯ ಗಡಿಭಾಗದಿಂದ ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ತೀರ್ಮಾನ ಮಾಡಿದ್ರು.
ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿ ಹಂಗೇರಿ-ಉಕ್ರೇನ್ ಗಡಿಯಲ್ಲಿರುವ ಜೋಹಾನ್ಸ್‌ಬರ್ಗ್ ತಲುಪಿ, ಹಂಗೇರಿ ಸರ್ಕಾರದ ಸಹಾಯದಿಂದ ಉಕ್ರೇನ್‌ನಿಂದ ಭಾರತೀಯರನ್ನು ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ರಷ್ಯಾ-ಉಕ್ರೇನ್‌ನ ಯುದ್ಧ ಪರಿಣಾಮಗಳು, ಉಕ್ರೇನ್‌ನಲ್ಲಿರುವ ಭಾರತೀಯರ ಭದ್ರತೆ ಕುರಿತು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಮೋದಿ ಮಾತನಾಡುವ ಸಾಧ್ಯತೆಯಿದೆ.