National

ಗಂಡನನ್ನು ಮರಕ್ಕೆ ಕಟ್ಟಿದರು; ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು..!

ಮುಜಾಫರ್‌ನಗರ(ಉತ್ತರ ಪ್ರದೇಶ): ಕಾಮುಕರ ಗುಂಪೊಂದು ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ, ಆತನ ಮುಂದೆಯೇ ಆತನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ನಡೆದಿದೆ. ಬುಧವಾರ ದಂಪತಿ ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದರು. ನಂತರ ರಾತ್ರಿ ಮನೆಗೆ ಹಿಂತಿರುಗುತ್ತಿದ್ದರು. ಇದೇ ವೇಳೆ ಸುತ್ತುವರಿದ ಹತ್ತು ಕಾಮುಕರ ಗುಂಪು ಈ ಕೃತ್ಯ ಎಸಗಿದೆ.

ದಂಪತಿಯನ್ನು ಮಾವಿನ ತೋಪಿಗೆ ಎಳೆದೊಯ್ದ ಕಾಮುಕರು, ಗಂಡನನ್ನು ಮರಕ್ಕೆ ಕಟ್ಟಿಹಾಕಿ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ನ್ಯೂ ಮಂಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಇಬ್ಬರು ಅಪ್ರಾಪ್ತರು ಸೇರಿದಂತೆ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Share Post