ಕ್ಷುಲ್ಲಕ ಕಾರಣಕ್ಕೆ ಜಗಳ; ಪ್ರೇಮಿಗಳಿಬ್ಬರೂ ಆತ್ಮಹತ್ಯೆ
ಮುಜಾಫ್ಫರ್ಪುರ: ಫೋನ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡ ಪ್ರೇಮಿಗಳು ಬೇರೆ ಬೇರೆ ಕಡೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಹಾರದ ಮುಜಾಫರ್ಪುರದ 23 ವರ್ಷದ ಅಂಜಲಿ ಮತ್ತು ಜೈಪುರದಲ್ಲಿ ನೆಲೆಸಿದ್ದ ವಿವೇಕ್ ಮೃತ ಪ್ರೇಮಿಗಳು. ಯುವತಿ ಮುಜಾಫರ್ಪುರ್ನಲ್ಲಿ ನೇಣಿಗೆ ಶರಣಾಗಿದ್ದರೆ, ವಿವೇಕ್ ಜೈಪುರದಲ್ಲಿ ಎಂಟನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಅಂಜಲಿ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಕಳೆದ ಬುಧವಾರ ರಾತ್ರಿ ವಿವೇಕ್ ಜತೆ ಫೋನ್ನಲ್ಲಿ ಮಾತನಾಡುತ್ತಲೇ ಯಾವುದೋ ಕಾರಣಕ್ಕೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಗಿದೆ. ಇದಾದ ನಂತರವೇ ಅಂದು ರಾತ್ರಿಯೇ ಅಂಜಲಿ ತನ್ನ ಕೋಣೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದ ವಿವೇಕ್ ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾನೆ.