National

ಸಿಎಂ ಜಗನ್‌ಗೆ ನಾಂಪಲ್ಲಿ ಕೋರ್ಟ್‌ನಿಂದ ಸಮನ್ಸ್:‌ 7 ವರ್ಷದ ಹಿಂದನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ

ಆಂಧ್ರಪ್ರದೇಶ: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರಿಗೆ ನಾಂಪಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿರುವುದು ಸಂಚಲನ ಮೂಡಿಸುತ್ತಿದೆ. ಮುಖ್ಯಮಂತ್ರಿ ಉನ್ನತ ಹುದ್ದೆ ಅಲಂಕರಿಸಿದ ವ್ಯಕ್ತಿಗೆ ಸಮನ್ಸ್ ಜಾರಿ ಮಾಡಿರುವುದು ಇದೇ ಮೊದಲು. ಸುಮಾರು ಏಳು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಸೋಮವಾರ, ಮಾರ್ಚ್ 28, 2022 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್‌ ಸಮನ್ಸ್‌ ನೀಡಿದೆ.

ಆದರೆ, ಜಗನ್‌ಗೆ ಕೋರ್ಟ್‌ಗೆ ಹಾಜರಾಗುವ ವಿಚಾರಕ್ಕೆ ವಿನಾಯಿತಿ ನೀಡುವಂತೆ ಸಿಎಂ ಜಗನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇದೀಗ ಸಿಎಂ ಜಗನ್‌ಗೆ ನಾಂಪಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿರುವುದು ಎಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಏನಿದು ಪ್ರಕರಣ?
2014ರ ಹುಜೂರ್ ನಗರ ಚುನಾವಣೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಜಗನ್, ಶ್ರೀಕಾಂತ್ ರೆಡ್ಡಿ ಮತ್ತು ನಾಗಿರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಚಾರ ನಡೆಸಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಲಾಗಿದೆ.

ಅಂದಿನಿಂದ ಈ ಪ್ರಕರಣ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್‌ ಪಡೆದವರು ನ್ಯಾಯಾಲಯಕ್ಕೆ ಹಾಜರಾಗಿ ವಿವರಣೆ ನೀಡಿ ಪ್ರಕರಣದಿಂದ ಹೊರಬಂದಿದ್ದಾರೆ. ಆದರೆ ಅಂದಿನಿಂದ ಜಗನ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ನಾಂಪಲ್ಲಿ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಸಿಎಂ ಜಗನ್ ನ್ಯಾಯಾಲಯಕ್ಕೆ ಹಾಜರಾಗುತ್ತಾರಾ? ಅಥವಾ ಇಲ್ಲವೇ? ಎಂಬುದನ್ನು ಕಾದು ನೋಡಬೇಕಿದೆ.

Share Post