ನ್ಯಾಷನಲ್ ಹೆರಾಲ್ಡ್ ಕೇಸ್; ಸೋನಿಯಾಗಾಂಧಿಗೆ ಸಮನ್ಸ್ ನೀಡಿದ ಇಡಿ
ನವದೆಹಲಿ; ನ್ಯಾಷನಲ್ ಹೆರಾಲ್ಡ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಜುಲೈ 21 ರಂದು ವಿಚಾರಣೆಗೆ ಹಾಜರಾಗುವಂತೆ ಹೊಸದಾಗಿ ಸಮನ್ಸ್ ನೀಡಲಾಗಿದೆ.
ಜೂನ್ ಎಂಟರಂದು ವಿಚಾರಣೆಗೆ ಹಾಜರಾಗಬೇಕೆಂದು ಸೋನಿಯಾಗೆ ಸಮನ್ಸ್ ನೀಡಲಾಗಿತ್ತು. ಆದರೆ ಅವರಿಗೆ ಆ ಸಮಯದಲ್ಲಿ ಕೊವಿಡ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಡಿಸ್ಚಾರಜ್ ಆದ ಮೇಲೆ ಕೂಡಾ ಒಂದು ಸಮನ್ಸ್ ನೀಡಲಾಗಿತ್ತು. ಆದ್ರೆ ವೈದ್ಯರು ರೆಸ್ಟ್ ತೆಗೆದುಕೊಳ್ಳಲು ಹೇಳಿದ್ದಾರೆ. ಹೀಗಾಗಿ ವಿಚಾರಣೆಯನ್ನು ಮುಂದೂಡಿ ಎಂದು ಸೋನಿಯಾಗಾಂಧಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಯ ದಿನಾಂಕವನ್ನು ಮುಂದೂಡಲಾಗಿತ್ತು. ಈಗ ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
ರಾಹುಲ್ ಗಾಂಧಿಯವರು ಐದು ದಿನಗಳ ಕಾಲ ವಿಚಾರಣೆ ಎದುರಿಸಿದ್ದನ್ನು ಇಲ್ಲಿ ನಾವು ನೆನಪಿಸಿಕೊಳ್ಳಬಹುದು.