National

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ; ಇಂದು ಮತ್ತೆ ಸೋನಿಯಾ ವಿಚಾರಣೆ

ನವದೆಹಲಿ;  ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ ಇಂದು ಮತ್ತೆ ಇಡಿ ಅಧಿಕಾರಿಗಳು ಮುಂದೆ ಹಾಜರಾಗಲಿದ್ದಾರೆ. ಜುಲೈ 21 ರಂದು ವಿಚಾರಣೆ ಎದುರಿಸಿದ್ದ ಸೋನಿಯಾಗಾಂಧಿಯವರಿಗೆ ಇಂದು ಮತ್ತೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಇಂದು ಇಡಿ ವಿಚಾರಣೆ ಎದುರಿಸಲಿದ್ದಾರೆ.

 

ಜುಲೈ 21 ರಂದು ಸೋನಿಯಾ ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಸೋನಿಯಾಗೆ ಅನಾರೋಗ್ಯ ಕಾಡುತ್ತಿರುವುದರಿಂದ ಅವರನ್ನು ಹೆಚ್ಚು ಹೊತ್ತು ವಿಚಾರಣೆಗೊಳಪಡಿಸಿಲ್ಲ. ಇನ್ನು ವಿಚಾರಣೆ ವಿರೋಧಿಸಿ ಇಂದು ಕೂಡಾ ದೇಶಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇತ್ತ ದೆಹಲಿ ಪೊಲೀಸರು ಕಾಂಗ್ರೆಸ್‌ ಪ್ರತಿಭಟನೆ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರತಿಭಟನೆ ಸ್ಥಳಗಳಲ್ಲಿ ವಿಡಿಯೋ ಚಿತ್ರೀಕರಣ ಕೂಡಾ ಮಾಡಲಿದ್ದಾರೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

Share Post