ನವದೆಹಲಿ ಬೆಂಕಿ ದುರಂತ; 24 ಮಹಿಳೆಯರು ನಾಪತ್ತೆ – ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ
ನವದೆಹಲಿ; ನವದೆಹಲಿಯಲ್ಲಿ ನಿನ್ನೆ ನಡೆದ ಭೀಕರ ಅಗ್ನಿ ದುರಂತದಲ್ಲಿ ಈಗಾಗಲೇ 27 ಮೃತದೇಹಗಳು ಪತ್ತೆಯಾಗಿವೆ. ಆದ್ರೆ, ಇನ್ನೂ ಸಾವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಯಾಕಂದ್ರೆ ಕಟ್ಟಡದಲ್ಲಿದ್ದ ಇನ್ನೂ 24 ಮಹಿಳೆಯರು ಸೇರಿ 25 ಮಂದಿ ನಾಪತ್ತೆಯಾಗಿದ್ದಾರೆ. ಸುಟ್ಟು ಕರಕಲಾದ ಕಟ್ಟಡದಲ್ಲಿ ಮನುಷ್ಯರ ಕೆಲ ಅವಶೇಷಗಳು ಸಿಕ್ಕಿವೆ. ಹೀಗಾಗಿ ಇನ್ನೂ ಹಲವರು ಘಟನೆಯಲ್ಲಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ನಂತರ ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೊಷಣೆ ಮಾಡಿದರು. ಇನ್ನು ಘಟನೆಯಲ್ಲಿ ಸಾವಿಗೀಡಾದವರ ಮೃತದೇಹಗಳನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಹೀಗಾಗಿ, ನಾಪತ್ತೆಯಾದವರ ಸಂಬಂಧಿಕರು ತಮ್ಮ ಪ್ರೀತಿಪಾತ್ರರನ್ನು ಹುಡುಕಿಕೊಂಡು ಆಸ್ಪತ್ರೆಗೆ ಬರುತ್ತಲೇ ಇದ್ದಾರೆ.