NationalPolitics

ಯೋಗಿ ಆದಿತ್ಯನಾಥ್‌ ಭೇಟಿ ಮಾಡಿದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು; ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದೆ. ಮೈತ್ರಿ ನಂತರ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ರಾಜಕೀಯದಲ್ಲಿ ಫುಲ್‌ ಆಕ್ಟೀವ್‌ ಆಗಿದ್ದಾರೆ. ಅವರು ಹಲವು ಬಿಜೆಪಿ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಇತ್ತೀಚೆಗೆ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಉತ್ತರ ಪ್ರದೇಶ ರಾಜಕಾರಣದ ಬೆಳವಣಿಗೆ, ಅಲ್ಲಿ ಬಿಜೆಪಿ ಹೇಗೆ ನೆಲೆಯೂರಿತು ಎಂಬುದರ ಬಗ್ಗೆ ಯೋಗಿ ಆದಿತ್ಯನಾಥ್‌ ಅವರು ನಿಖಿಲ್‌ಗೆ ಪಾಠ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ನಿಖಿಲ್‌ ಕುಮಾರಸ್ವಾಮಿಯವರು ಯೋಗಿ ಆದಿತ್ಯನಾತ್‌ ಅವರಿಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಗಿಫ್ಟ್ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿಖಿಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು ಎಂದು ಬರೆದುಕೊಂಡಿದ್ದಾರೆ.

 

Share Post