ಮತ್ತೆ ಬಿಹಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
ಬಿಹಾರ; ನಿನ್ನೆ ತಾನೇ ಬಿಜೆಪಿ ಜೊತೆ ಸಖ್ಯ ಮುರಿದುಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ ಇವತ್ತು ಮತ್ತೆ ಸಿಎಂ ಸ್ಥಾನಕ್ಕೇರಿದ್ದಾರೆ. ಆರ್‌ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನ್ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ನಿತೀಶ್ ಕುಮಾರ್ 8 ನೇ ಬಾರಿಗೆ ಬಿಹಾರ ಸಿಎಂ ಆಗಿ ಪದಗ್ರಹಣ ಮಾಡಿದರು. ಇನ್ನು ಬಿಹಾರದ ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡಾ ಪ್ರಮಾಣವಚನ ಸ್ವೀಕರಿಸಿದರು.
ಪಾಟ್ನಾದ ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ನಿಯೋಜಿತ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಮತ್ತು ಅವರ ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ ಮತ್ತು ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.