ಹಿಜಾಬ್ ವಿವಾದ; ಮೇಲ್ಮನವಿ ಅರ್ಜಿ ತುರ್ತು ವಿಚಾರಣೆ ಇಲ್ಲ – ಸುಪ್ರೀಂಕೋರ್ಟ್
ನವದೆಹಲಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರವಾಗಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನೋ ಎಂದಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇಂದು ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ಬಳಿಕ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.