InternationalNational

ಇಂದು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ ೧ ಗಂಟೆಗೆ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರದ ಜೆವಾರ್‌ನಲ್ಲಿ ಈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಲಿದ್ದಾರೆ.

ಇದರೊಂದಿಗೆ ಉತ್ತರ ಪ್ರದೇಶವು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತದ ಏಕೈಕ ರಾಜ್ಯವೆಂಬ ಹೆಗ್ಗಳಿಕೆ ಪಡೆಯಲಿದೆ. ಭಾರತದ ಮೊಟ್ಟ ಮೊದಲ ಶೂನ್ಯ ಮಾಲಿನ್ಯ ಹೊರಸೂಸುವ ವಿಮಾನ ನಿಲ್ದಾಣ ಇದಾಗಿದೆ.

ದೇಶದಲ್ಲಿ ಸಂಪರ್ಕ ಜಾಲವನ್ನು ವಿಸ್ತರಿಸುವ ಮತ್ತು ಭವಿಷ್ಯದ ವಾಯುಯಾನ ವಲಯವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಯವರ ದೂರದೃಷ್ಟಿಗೆ ಅನುಗುಣವಾಗಿ ಈ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ. ಇತ್ತೀಚೆಗೆ ಉದ್ಘಾಟನೆಗೊಂಡ ಕುಶಿನಗರ ವಿಮಾನ ನಿಲ್ದಾಣ ಮತ್ತು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಅನೇಕ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಾಕ್ಷಿಯಾಗಿರುವ ಉತ್ತರ ಪ್ರದೇಶದ ಮೇಲೆ ಪ್ರಧಾನಿ ಅವರ ದೂರದೃಷ್ಟಿಯ ವಿಚಾರದಲ್ಲಿ ವಿಶೇಷ ಗಮನ ಹರಿಸಲಾಗಿದೆ.

Share Post