National

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ; ಸಿಎಂ ಬೊಮ್ಮಾಯಿ

ನವದೆಹಲಿ; ಪರಿಷತ್‌, ರಾಜ್ಯಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದೆ. ಹೀಗಾಗಿ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚೆ ಮಾಡಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ದೆಹಲಿಗೆ  ತೆರಳಿರುವ ಸಿಎಂ ಬೊಮ್ಮಾಯಿ, ಯಾವ ಉದ್ದೇಶಕ್ಕೆ ಎಂದು ಭೇಟಿಯಾಗಿದ್ದಾರೆ ಎಂಬುದನ್ನು ತಿಳಿಸಿರಲಿಲ್ಲ. ಆದರೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದೆ. ತುರ್ತು ಕೆಲಸ ಇದ್ದ ಹಿನ್ನೆಲೆ ಅವರನ್ನು ಭೇಟಿಯಾಗಿಲ್ಲ. ಆದರೆ ಫೋನ್‍ನಲ್ಲಿ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಜೊತೆಗೆ ಚರ್ಚೆ ಮಾಡಿದೆ ಎಂದು ತಿಳಿಸಿದರು.

Share Post