CinemaCrimeNational

ಹೆಸರಾಂತ ಮರಾಠಿ ನಟ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆ

ಪುಣೆ; ಪ್ರಖ್ಯಾತ ಮರಾಠಿ ನಟ ರವೀಂದ್ರ ಮಹಾಜನಿ ಅವರು ದುರಂತ ಅಂತ್ಯ ಕಂಡಿದ್ದಾರೆ. ಅವರು ತಮ್ಮ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೆಲ ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರೂ ಗಮನಿಸಿಲ್ಲ. ದೇಹ ಕೊಳೆತಿದ್ದರಿಂದ ವಾಸನೆ ಬಂದಿದೆ. ಹೀಗಾಗಿ ಪರಿಶೀಲನೆ ನಡೆಸಿದಾಗ ರವೀಂದ್ರ ಮಹಾಜನಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಪುಣೆಯ ತಾಳೇಗಾಂವ್ ದಭಾಡೆ ಸಮೀಪದ ಅಂಬಿ ಗ್ರಾಮದಲ್ಲಿ ರವೀಂದ್ರ ಅವರು ವಾಸ ಮಾಡುತ್ತಿದ್ದರು. ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಪೊಲೀಸರು ಬಂದು ಪರಿಶೀಲನೆ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಶುಕ್ರವಾರ ಸಂಜೆಯಿಂದ ಫ್ಲ್ಯಾಟ್‌ನಿಂದ ವಾಸನೆ ಬರುತ್ತಿತ್ತೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

70-80ರ ದಶಕದಲ್ಲಿ ರವೀಂದ್ರ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದರು. ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದ ರವೀಂದ್ರ, ಮರಾಠಿ, ಗುಜರಾತಿ ಭಾಷೆಗಳಲ್ಲೂ ಚಿತ್ರಗಳನ್ನು ಮಾಡಿದ್ದಾರೆ.

Share Post