ಸಂಸದ ತೇಜಸ್ವಿ ಸೂರ್ಯಗೆ ಪೊಲೀಸ್ ನೋಟಿಸ್; ಏ.28ಕ್ಕೆ ಹಾಜರಾಗಲು ಸೂಚನೆ
ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಪ್ರತಿಭಟನೆ ಮಾಡಿದ್ದಲ್ಲದೆ, ಗೇಟ್‌ಗೆ ಬಣ್ಣ ಬಳಿದು, ಸಿಸಿಟಿವಿ ಧ್ವಂಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಏಪ್ರಿಲ್ 28 ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಲು ತೇಜಸ್ವಿ ಸೂರ್ಯ ಅವರಿಗೆ ಸೂಚನೆ ನೀಡಲಾಗಿದೆ. ಈ ಪ್ರಕರಣದ ಸಂಬಂಧ ಮಾಜಿ ಮೇಯರ್ ಜಯಪ್ರಕಾಶ್ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ವಾಸು ರುಖ್ದ್ ಸೇರಿ 8 ಆರೋಪಿಗಳನ್ನು ಬಂಧಿಸಲಾಗಿತ್ತು.
ಕಾಶ್ಮೀರಿ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಏಪ್ರಿಲ್ 1 ರಂದು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸದ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬೂಮ್ ಬ್ಯಾರಿಯರ್ ಮತ್ತು ಸಿಸಿಟಿವಿ ಒಡೆದಿದ್ದಲ್ಲದೇ, ಮುಖ್ಯ ಗೇಟ್‌ಗೆ ಬಣ್ಣ ಎರಚಿದ್ದರು. ಈ ಘಟನೆಗೆ ಸಂಬಂಧ ಸಿವಿಲ್ ಲೈನ್ ಠಾಣೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದರು. ಎರಡು ವಾರಗಳ ನಂತರ ಅವರಿಗೆ ಜಾಮೀನು ಮಂಜೂರಾಗಿತ್ತು.