National

ಉನ್ನಾವೋದಲ್ಲಿ ಆಸ್ಪತ್ರೆಯಲ್ಲಿ ನಡೆಯಿತಾ ಅತ್ಯಾಚಾರ..?; ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್‌ ದೇಹ

ಉನ್ನಾವೊ: ಉತ್ತರ ಪ್ರದೇಶದ ಉನ್ನಾವೋದ ಖಾಸಗಿ ಆಸ್ಪತ್ರೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್‌ ಮೃತದೇಹ ಪತ್ತೆಯಾಗಿದೆ. ಈಕೆ ನರ್ಸ್‌ ಆಗಿ ಶನಿವಾರವಷ್ಟೇ ಕೆಲಸಕ್ಕೆ ಸೇರಿದ್ದಳು. ಅದೇ ದಿನ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾಳೆ. ಹೀಗಾಗಿ ಈ ಸಾವಿನ ಹಿಂದೆ ಹಲವು ಅನುಮಾನಗಳು ಸೃಷ್ಟಿಯಾಗಿವೆ.

ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಸಿಂಗ್ ಹೋಂನ ನಿರ್ವಾಹಕ ಸೇರಿ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಪ್ರಥಮ ಮಾಹಿತಿ ಆಧರಿಸಿ ಈ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವೊ ಹೆಚ್ಚುವರಿ ಎಸ್ಪಿ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ.

Share Post