HealthNational

ದೇಶದಲ್ಲಿ ಒಂದೂ ಒಮಿಕ್ರಾನ್‌ ಪ್ರಕರಣವಿಲ್ಲ; ಕೇಂದ್ರ ಆರೋಗ್ಯ ಸಚಿವ

ನವದೆಹಲಿ:‌ ದೇಶದಲ್ಲಿ ಇದುವರೆಗೂ ಒಂದೇ ಒಂದು ಒಮಿಕ್ರಾನ್‌ ಪ್ರಕರಣ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಹೊಸ ಕೊರೋನಾ ರೂಪಾಂತರ ತಳಿ ಒಮಿಕ್ರಾನ್‌  ಇದುವರೆಗೂ 14 ದೇಶಗಳಲ್ಲಿ ಕಂಡುಬಂದಿದೆ. ಭಾರತದಲ್ಲಿ ಇದುವರೆಗೆ ಯಾವುದೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಕೇಂದ್ರ ಈಗಾಗಲೇ ಒಮಿಕ್ರಾನ್‌ ಸೋಂಕು ದೇಶದಲ್ಲಿ ಹರಡದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಮನ್ಸುಖ್‌ ಮಾಂಡವೀಯ ಹೇಳಿದ್ದಾರೆ.

Share Post