National

ಒಂದು ದೇಶ, ಒಂದು ಚುನಾವಣೆ; ವರದಿ ತಯಾರಿಸಲು ರಾಮನಾಥ್‌ ಕೋವಿಂದ್‌ ನೇತೃತ್ವದ ಕಮಿಟಿ ರಚನೆ

ನವದೆಹಲಿ; ದೇಶಾದ್ಯಂತ ಒಂದೇ ಬಾರಿಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಒಂದು ದೇಶ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ ಬಾಧಕಗಳನ್ನು ಕೇಂದ್ರ ಸರ್ಕಾರ ಅಧ್ಯಯನ ಮಾಡಲು ಮುಂದಾಗಿದೆ. ಇದಕ್ಕಾಗಿ ಒಂದು ಸಮಿತಿಯನ್ನು ರಚನೆ ಮಾಡಲಾಗಿದೆ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ವಿಶೇಷ ಅಧಿವೇಶನ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಇದಾದ ಮರುದಿನವೇ ಕೇಂದ್ರ ಇಂತಹದ್ದೊಂದು ಅಚ್ಚರಿ ನಿರ್ಧಾರ ಮಾಡಿದೆ. ಅಧಿವೇಶನದಲ್ಲಿ ʼಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದೇ ಒಂದು ದೇಶ, ಒಂದು ಚುನಾವಣೆಯ ಉದ್ದೇಶ. ಇದರಿಂದ ಚುನಾವಣೆಗೆ ಆಗುವ ವೆಚ್ಚ ಕಡಿಮೆಯಾಗಲಿದೆ ಎಂದು ಹೇಳಲಾಗುತ್ತಿದೆ.

 

Share Post