National

ತೈಲ ಬೆಲೆ ಏರಿಕೆಗೆ ಆಕ್ರೋಶ; ಲೋಕಸಭೆಯಿಂದ ಪ್ರತಿಪಕ್ಷಗಳ ಸಭಾತ್ಯಾಗ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್‌ ಬೆಲೆ 50 ರೂಪಾಯಿ ಏರಿಕೆ ಹಾಗೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯನ್ನು ಪ್ರತಿಪಕ್ಷಗಳು ಖಂಡಿಸಿವೆ. ತೈಲ ಬೆಲೆ ಏರಿಕೆ ಖಂಡಿಸಿಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಬಳಿಕ ಬೆಲೆ ಏರಿಕೆ ವಿಚಾರವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಪಂಚ ರಾಜ್ಯಗಳ ಚುನಾವಣೆ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾತ್ತದೆ ಎಂದು ನಾವು ಮೊದಲೇ ಹೇಳಿದ್ದೆವು. ನಾವು ನಿರೀಕ್ಷಿಸಿದಂತೆಯೇ ಏರಿಕೆಯಾಗಿದೆ ಎಂದು ಆರೋಪಿಸಿದರು. ಇದೇ ವೇಳೆ ಕಾಂಗ್ರೆಸ್, ಟಿಎಂಸಿ, ಎನ್‌ಸಿಪಿ, ಡಿಎಂಕೆ ಮತ್ತು ಎಡ ಪಕ್ಷಗಳ ಸದಸ್ಯರು ತಮ್ಮ ಸೀಟುಗಳಿಂದಲೇ ಇಂಧನ ಬೆಲೆ ಏರಿಕೆ ವಿರುದ್ಧ ಘೋಷಣೆ ಕೂಗಿದರು. ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

Share Post