ಪೊಲೀಸರು ಸೀಜ್ ಮಾಡಿದ್ದ 350 ವಾಹನಗಳು ಭಸ್ಮ
ನವದೆಹಲಿ : ದೆಹಲಿಯ ಸಾಗರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳು ಬೆಂಕಿಗಾಹುತಿಯಾಗಿದೆ. 350ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿದೆ.
ಉಪ ಪೊಲೀಸ್ ಆಯುಕ್ತರಾದ ಗೌರವ್ ಶರ್ಮ ವಾಹನಗಳು ಸುಟ್ಟು ಹೋಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿ 250 ಬೈಕ್‌ಗಳು ಮತ್ತು 100 ಕಾರುಗಳು ಸುಟ್ಟು ಹೋಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಬೆಂಕಿ ಹೊತ್ತಿಕೊಂಡಿದ್ದನ್ನು ತಕ್ಷಣ ಗಮನಿಸಿ ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸಲು ಸಾಕಷ್ಟು ಪ್ರಯತ್ನ ಪಟ್ಟಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ಕೊಟ್ಟು ಬೆಂಕಿಗೆ ಕಾರಣ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.