ದೇಶಾದ್ಯಂತ ಮೊದಲ ದಿನ 40 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಲಸಿಕೆ
ನವದೆಹಲಿ : ದೇಶಾದ್ಯಂತ 15 ರಿಂದ 18 ವರ್ಷದ ಮಕ್ಕಳಿಗೆ ನಿನ್ನೆಯಿಂದ ಲಸಿಕೆ ಅಭಿಯಾನ ಶುರುವಾಗಿದೆ. ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗ್ತಿದೆ. ಈ ಅಭಿಯಾನಕ್ಕೆ ಮೊದಲ ದಿನವೇ ಉತ್ತಮ ರೆಸ್ಪಾನ್ಸ್ ಲಭಿಸಿದೆ. ೪೦ ಲಕ್ಷಕ್ಕೂ ಅಧಿಕ ಮಕ್ಕಳು ಲಸಿಕೆ ಪಡೆದಿದ್ದಾರೆ ಎಂದು ಕೋವಿನ್ ವೆಬ್ ಪೋರ್ಟಲ್‌ನಲ್ಲಿ ವರದಿಯಾಗಿದೆ.
ಮೂರನೇ ಅಲೆ ಮತ್ತು ಓಮಿಕ್ರಾನ್ ಭೀತಿಯಿಂದಾಗಿ 15 ರಿಂದ 18 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ. ಇನ್ನು ನಮ್ಮ ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ಮಕ್ಕಳು ಲಸಿಕೆಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ.