ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ನಿಧನ – ಮೋದಿ ಸಂತಾಪ
ಪುಣೆ : ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ (74) ಪುಣೆಯ ಗ್ಯಾಲಕ್ಸಿ ಕೇರ್ ಆಸ್ಪತ್ರೆಯಲ್ಲಿ ಮಂಗಳವಾರ 8.10ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೆ ಮಂಗಳವಾರ ರಾತ್ರಿ ಕೊನೆಯುಸಿರೆಳೆದರು.
ಮಾಯಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಿಂಧುತಾಯಿ ಸಪ್ಕಾಲ್, ಪುಣೆಯಲ್ಲಿ ಸನ್ಮತಿ ಬಾಲ ನಿಕೇತನ ಸಂಸ್ಥೆ ಅನಾಥಾಶ್ರಮ ಹಾಗೂ ಪ್ರಭುನೆ ಪುನರುತ್ತನ್ ಸಮರಸತಾ ಗುರುಕುಲಂ ಎಂಬ ಎನ್ಜಿಒ ನಡೆಸುತ್ತಿದ್ದರು.
ಸಿಂಧುತಾಯಿ ಸಪ್ಕಾಲ್ ತಮ್ಮ ವೃತ್ತಿ ಜೀವನದಲ್ಲಿ ಸಾವಿರಕ್ಕೂ ಹೆಚ್ಚು ಅನಾಥ ಮಕ್ಕಳನ್ನು ದತ್ತು ಪಡೆದಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಿಂಧುತಾಯಿ ಸಪ್ಕಾಲ್ ಅವರ ಅಗಲಿಕೆಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
Dr. Sindhutai Sapkal will be remembered for her noble service to society. Due to her efforts, many children could lead a better quality of life. She also did a lot of work among marginalised communities. Pained by her demise. Condolences to her family and admirers. Om Shanti. pic.twitter.com/nPhMtKOeZ4
— Narendra Modi (@narendramodi) January 4, 2022