National

ಕುಪ್ವಾರಾ ಬಳಿ ಎನ್‌ಕೌಂಟರ್‌; ಇಬ್ಬರು ಉಗ್ರರ ಹತ್ಯೆ

ಕುಪ್ವಾರಾ​; ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಇಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ.

   ಕುಪ್ವಾರದ ಚಕ್ತಾರಸ್ ಪ್ರದೇಶದಲ್ಲಿ ಇಂದು ಮುಂಜಾನೆ ಈ ಎನ್‌ಕೌಂಟರ್‌ ನಡೆದಿದೆ. ಅಲ್ಲಿ ಇನ್ನೂ ಕೆಲ ಉಗ್ರರು ಅಡಗಿದ್ದು, ಎರಡನೇ ಕಾರ್ಯಾಚರಣೆ ಶುರುವಾಗಿದೆ. ಇದಕ್ಕೂ ಮುನ್ನ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೊರಾ ಪಾನಿಪೋರಾ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿತ್ತು. ಈ ಕಾಳಗದಲ್ಲಿ ಎಲ್‌ಇಟಿ ಉಗ್ರನನ್ನು ಸೇನೆ ಹೊಡೆದುರುಳಿಸಿತ್ತು. ಆದ್ರೆ ಮೂವರು ಉಗ್ರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

Share Post