National

ದೆಹಲಿಯಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಬಳಿ ಪ್ರತಿಭಟನೆ-ಎಂಬಸಿ ಬಳಿ ಬಿಗಿ ಭದ್ರತೆ

ದೆಹಲಿ: ಉಕ್ರೇನ್‌ನೊಂದಿಗೆ ರಷ್ಯಾದ ಯುದ್ಧ ಪ್ರಾರಂಭವಾಗಿ 40 ಗಂಟೆಗಳು ಕಳೆದಿವೆ. ರಷ್ಯಾ ಉಕ್ರೇನ್ ಮೇಲೆ ಬಾಂಬ್ ದಾಳಿಯನ್ನು ಮುಂದುವರೆಸಿದೆ. ಹಾಗಾಗಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ನಲ್ಲಿ ರಷ್ಯಾ ಸೇನಾ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸುವಂತೆ  ಒತ್ತಾಯಿಸಿದ್ದಾರೆ.

ದೆಹಲಿಯ ಶಾಂತಿಪಥದಲ್ಲಿರುವ ರಷ್ಯಾದ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಅಪರಿಚಿತ ಗುಂಪು  ಕರೆ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಎದುರು ಮೂರು ಹಂತದ ಭದ್ರತೆ ಘೋಷಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ರಷ್ಯಾ ರಾಯಭಾರಿ ಕಚೇರಿ ಬಳಿ ಹೈ ಅಲರ್ಟ್ ಘೋಷಿಸಲಾಗಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯರು ತಮ್ಮ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಉಕ್ರೇನ್‌ನಲ್ಲಿ ಪ್ರಸ್ತುತ 16,000 ಭಾರತೀಯರಿದ್ದಾರೆ ಎನ್ನಲಾಗಿದೆ.

ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಪೋಷಕರು ರಷ್ಯಾದ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಉಕ್ರೇನ್ ಮೇಲಿನ ತನ್ನ ಯುದ್ಧವನ್ನು ತಕ್ಷಣವೇ ಕೊನೆಗೊಳಿಸಬೇಕೆಂದು, ಉಕ್ರೇನ್‌ನಲ್ಲಿ ತಮ್ಮ ಮಕ್ಕಳನ್ನು ಬಲಿಯಾಗುತ್ತಿದ್ದಾರೆಂದು ರಷ್ಯಾದ ರಾಯಭಾರ ಕಚೇರಿ ಬಳಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳ ಪೋಷಕರು ನಿರ್ಧರಿಸಿದ್ದಾರೆ.

Share Post