NationalPolitics

ಸೋಮವಾರದಿಂದ ಸಂಸತ್‌ ಅಧಿವೇಶನ ; ಮೊದಲ ದಿನವೇ ಕೃಷಿ ಕಾಯ್ದೆ ರದ್ದು ಮಸೂದೆ

ನವದೆಹಲಿ: ಸೋಮವಾರದಿಂದ ಚಳಿಗಾಲದ ಸಂಸತ್‌ ಅಧಿವೇಶನ ಶುರುವಾಗಲಿದೆ. ಮೊದಲ ದಿನವೇ ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದು ಮಾಡುವ ಮಸೂದೆ ಮಂಡನೆ ಮಾಡಲಾಗುತ್ತಿದೆ.

ಚಳಿಗಾಲದ ಅಧಿವೇಶನದ ಆರಂಭದ ದಿನವಾದ ಸೋಮವಾರದಂದು ಲೋಕಸಭೆ ಮುಂದೆ ಕೃಷಿ ರದ್ದತಿ ಕಾಯ್ದೆಗಳು ಬರಲಿವೆ ಎಂದು ಕೇಂದ್ರ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.

ಇನ್ನು ಸೋಮವಾರ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಕಾಂಗ್ರೆಸ್ ಸಂಸದರ ಸಭೆ ನಡೆಸಲಿದಾರೆ. ಕಲಾಪದ ವೇಳೆ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಕ್ಕಾಗಿ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ವಿಧೇಯಕ ಅಂಗೀಕಾರವಾಗುವ ಮೊದಲು ಚರ್ಚೆ ನಡೆಸಬೇಕು ಎಂಬುದು ಕಾಂಗ್ರೆಸ್‌ ಸೇರಿ ಹಲವು ಪ್ರತಿಪಕ್ಷಗಳ ವಾದ.  ಇದೇ ವಿಚಾರದ ಮೇಲೆ ಕಲಾಪದಲ್ಲಿ ಕೋಲಾಹಲವೆಬ್ಬಿಸುವ ಸಾಧ್ಯತೆ ಇದೆ.

Share Post