ಚಳಿಗಾಲದ ಸಂಸತ್ ಅಧಿವೇಶನ ಆರಂಭ ; ಇಂದು ಕೃಷಿ ಮಸೂದೆ ವಾಪಸ್
ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಕೃಷಿ ತಿದ್ದುಪಡಿ ಕಾಯ್ದೆಗಳ ವಾಪಸ್ ಗೆ ಇಂದು ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಮೊದಲ ದಿನವೇ ಮೂರು ಕೃಷಿ ಕಾಯ್ದೆಗಳ ತಿದ್ದುಪಡಿ ಮಸೂದೆಗಳನ್ನು ವಾಪಸ್ ಪಡೆಯುವುದರ ಬಗ್ಗೆ ತೀರ್ಮಾನ ಆಗುವ ಸಾಧ್ಯತೆ ಇದೆ.
ಇನ್ನು ಕಲಾಪ ಶುರುವಾಗುವುದಕ್ಕೂ ಮುಂಚೆ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ವಿಪಕ್ಷ ನಾಯಕ ಸಭೆ ನಡೆಯಿತು. ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಗಳ ರದ್ದುಪಡಿಸುವ ಮಸೂದೆ ಮಂಡಿಸಲು ಮುಂದಾಗಿದೆ. ಆದರೆ ಈ ಬಗ್ಗೆ ಚರ್ಚೆ ನಡೆಸಿಯೇ ಮಂಡನೆ ಮಾಡಬೇಕು. ಇದಕ್ಕಾಗಿ ಸರ್ಕಾರವನ್ನು ಆಗ್ರಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.