ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಕೋರ್ಟ್ ತಡೆ
ದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಆಯೋಗದ ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಮತಾ ಸರ್ಕಾರ ಮಾಜಿ ಎಸ್‌ಸಿ ನ್ಯಾಯಮೂರ್ತಿ ಎಂ.ಬಿ ಲೋಕೂರ್ ಅಧ್ಯಕ್ಷತೆಯಲ್ಲಿ 2 ಸದಸ್ಯರ ಆಯೋಗವನ್ನು ರಚಿಸಿತ್ತು. ಈ ಸಂಬಂಧ ಇಂದು ನಡೆದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ತನಿಖಾ ಸಮಿತಿಗೆ ತಡೆ ನೀಡಿದೆ. ಗ್ಲೋಬಲ್ ವಿಲೇಜ್ ಫೌಂಡೇಶನ್ ಸಲ್ಲಿಸಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಆಯೋಗವನ್ನು ಸ್ಥಾಪಿಸಿದ ಪಶ್ಚಿಮ ಬಂಗಾಳ ಸರ್ಕಾರವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.