National

7 ದಿನದಲ್ಲಿ 6 ಬಾರಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ; ಇವತ್ತಿನ ದರ ಎಷ್ಟು ಗೊತ್ತಾ..?

ನವದೆಹಲಿ: ಕಳೆದ ಏಳು ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಆರು ಬಾರಿ ಏರಿಕೆಯಾಗಿದೆ. ಇಂದು ಪೆಟ್ರೋಲ್‌ ಲೀಟರ್‌ಗೆ 30 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್‌ ಲೀಟರ್‌ಗೆ 35 ಪೈಸೆ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 4 ರೂಪಾಯಿ, ಡೀಸೆಲ್ ಬೆಲೆ 4.10 ರೂಪಾಯಿಗೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್​ಗೆ 104.78 ರೂಪಾಯಿ, ಡೀಸೆಲ್ ಬೆಲೆ ಲೀಟರ್​ಗೆ 89.02 ರೂಪಾಯಿ ಇದೆ.

 

   ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸಲಾಗಿದ್ದು, ರಾಜ್ಯಗಳ ಸ್ಥಳೀಯ ತೆರಿಗೆಯವನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಪಂಚರಾಜ್ಯಗಳ ಚುನಾವಣೆಯ ವೇಳೆ ಸುಮಾರು ನಾಲ್ಕು ತಿಂಗಳ ಕಾಲ ತೈಲ ಬೆಲೆಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಕಚ್ಚಾ ತೈಲ ಬೆಲೆ ಬ್ಯಾರೆಲ್​​ಗೆ 100 ಅಮೆರಿಕನ್ ಡಾಲರ್ ತಲುಪಿದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 9 ರೂಪಾಯಿಯಿಂದ 12 ರೂಪಾಯಿಗೆ ಹೆಚ್ಚಿಸಬೇಕಾಗುತ್ತದೆ. ಒಂದು ವೇಳೆ ಕಚ್ಚಾ ತೈಲ ಬೆಲೆ ಬ್ಯಾರೆಲ್​​ಗೆ 110ರಿಂದ 120 ಅಮೆರಿಕನ್ ಡಾಲರ್ ತಲುಪಿದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 15 ರೂಪಾಯಿಯಿಂದ 20 ರೂಪಾಯಿಗೆ ಹೆಚ್ಚಿಸಬೇಕಾಗುತ್ತದೆ ಎಂದು CRISIL ಹೇಳಿದೆ.

Share Post