National

ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಿಗಳ ನೇಮಕ; ಪ್ರಧಾನಿ ನರೇಂದ್ರ ಮೋದಿ

ನವದೆಹಲಿ; ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 10 ಲಕ್ಷ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯ ಪರಾಮರ್ಶೆ ನಡೆಸಿದ ಬಳಿಕ ಮೋದಿ ಅವರು ಈ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವೀಟ್‌ ಮಾಡಿದೆ.

ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ಬಗ್ಗೆ ವಿಪಕ್ಷಗಳಿಂದ ಸತತವಾಗಿ ಟೀಕೆ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲೇ ಮೋದಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಪ್ರವೃತ್ತರಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಾಗುವುದು. ಪ್ರಧಾನ ಮಂತ್ರಿಗಳು ನೇಮಕಾತಿ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್‌ ಮಾಡಿದೆ.

Share Post