National

ಪೊಲೀಸರಿಗೆ ಒಂದು ದೇಶ ಒಂದು ಸಮವಸ್ತ್ರ; ಪ್ರಧಾನಿ ಮೋದಿ ಪ್ರಸ್ತಾಪ

ಸೂರಜ್‌ಕುಂಡ್‌ (ಹರಿಯಾಣ); ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ ಪರಿಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪ ಮಾಡಿದ್ದಾರೆ. ಹರಿಯಾಣದಲ್ಲಿ ನಡೆಯುತ್ತಿರುವ ರಾಜ್ಯಗಳ ಗೃಹಸಚಿವರ ಚಿಂತನ ಶಿಬಿರದಲ್ಲಿ ಮಾತನಾಡಿದ ಅವ್ರು, ಇದು ನನ್ನ ಸಲಹೆ ಅಷ್ಟೇ. ರಾಜ್ಯಗಳ ಮೇಲೆ ಈ ಬಗ್ಗೆ ಒತ್ತಡ ತರಲು ನಾನು ಬಯಸೋದಿಲ್ಲ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳು ಹಾಗೂ ಅಪರಾಧಿಗಳನ್ನು ನಿಯಂತ್ರಿಸಲು ರಾಜ್ಯಗಳ ನಡುವೆ ನಿಕಟ ಸಹಕಾರ ಅಗತ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಕಾನೂನು–ಸುವ್ಯವಸ್ಥೆ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸಲು ಎಲ್ಲಾ ಭದ್ರತಾ ಏಜೆನ್ಸಿಗಳು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಅವರು ಮನವಿ ಮಾಡಿದರು.

Share Post