National

ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಪೊಂಗಲ್‌ನಲ್ಲಿ ಭಾಗಿ

ಚೆನೈ : ತಮಿಳುನಾಡಿನ ಬಿಜೆಪಿ ಘಟಕವು ಮಧುರೈನಲ್ಲಿ ಜನವರಿ 12ರಂದು ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಿಸಲಿದ್ದಾರೆ. ಈ ಮೂಲಕ ತಮಿಳುನಾಡಿನ ಪೊಂಗಲ್‌ ಸುಗ್ಗಿ ಹಬ್ಬದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಅವರು ಭಾಗವಹಿಸುತ್ತಿರುವ ಕಾರ್ಯಕ್ರಮಕ್ಕೆ ಮೋದಿ ಪೊಂಗಲ್‌ ಎಂದೇ ಹೆಸರಿಡಲಾಗಿದೆ. ಈ ಕಾರ್ಯಕ್ರಮದಲ್ಲಿ ಇತರ ಚಟುವಟಿಕೆಗಳ ಜೊತೆಗೆ ಪೊಂಗಲ್‌ ಖಾದ್ಯವನ್ನು ತಯಾರಿಸಲಿದ್ದಾರೆ.

ರಾಜ್ಯದ ವಿವಿಧೆಡೆ ನಿರ್ಮಾಣಗೊಂಡಿರುವ ವೈದ್ಯಕೀಯ ಕಾಲೇಜುಗಳನ್ನು ಮೋದಿ ಅವರು ಉದ್ಘಾಟಿಸಲಿದ್ದಾರೆ.

Share Post