ದೇಶದಲ್ಲಿ 5G ಯುಗದ ಬಾಗಿಲು ತೆರೆದಿದೆ; ಮೋದಿ
ದೆಹಲಿ; ದೇಶದಲ್ಲಿ ಹೊಸ 5ಜಿ ಯುಗದ ಬಾಗಿಲು ತೆರೆದಿದೆ. 8 ವರ್ಷಗಳ ಹಿಂದೆ ದೇಶದಲ್ಲಿ ಕೇವಲ 2 ಮೊಬೈಲ್ ಉತ್ಪಾದನಾ ಘಟಕಗಳಿದ್ದವು. ಇಂದು ಭಾರತದಲ್ಲಿ 200ಕ್ಕೂ ಹೆಚ್ಚು ಘಟಕಗಳಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೆಹಲಿಯ ಪ್ರಗತಿ ಮೈದಾನದಲ್ಲಿ 5ಜಿ ತಂತ್ರಜ್ಞಾನ ಸೇವೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಇಂದು ಭಾರತದ ಪಾಲಿಗೆ ಐತಿಹಾಸಿಕ ದಿನ. 2G, 3G, 4G ಸಮಯದಲ್ಲಿ ಭಾರತ ತಂತ್ರಜ್ಞಾನಕ್ಕಾಗಿ ಇತರ ದೇಶಗಳ ಮೇಲೆ ಅವಲಂಬಿತವಾಗಿತ್ತು. ಆದರೆ, 5ಜಿ ಮೂಲಕ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ. 5G ಸೌಲಭ್ಯದೊಂದಿಗೆ ಭಾರತ ಮೊದಲ ಬಾರಿಗೆ ಟೆಲಿಕಾಂ ತಂತ್ರಜ್ಞಾನದಲ್ಲಿ ಜಾಗತಿಕ ಗುಣಮಟ್ಟವನ್ನು ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.