ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲಿರುವ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ; ನಾಳೆ ಅಹಮದಾಬಾದ್‌ನಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಈ ಪಂದ್ಯ ವೀಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ನೋಡಲು ಮೋದಿ ಹಾಗೂ ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಬರುತ್ತಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ.