NationalTechTechnology

ಇಂದಿನಿಂದ 5ಜಿ ಸೇವೆ ಆರಂಭ; ಪ್ರಧಾನಿ ಮೋದಿಯಿಂದ ಚಾಲನೆ

ನವದೆಹಲಿ; ಇಂದಿನಿಂದ ದೇಶದ ವಿವಿಧ ನಗರಗಳಲ್ಲಿ 5ಜಿ ಸೇವೆ ಆರಂಭವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು 5ಜಿ ದೂರಸಂಪರ್ಕ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. ಆಯ್ದ ನಗರಗಳಲ್ಲಿ 5ಜಿ ಸೇವೆ ಚಾಲ್ತಿಗೆ ಬರಲಿದ್ದು, ಎರಡು ವರ್ಷಗಳಲ್ಲಿ ಹಂತಹಂತವಾಗಿ ಇಡೀ ದೇಶದಲ್ಲಿ ಲಭ್ಯವಾಗಲಿದೆ.

ಮುಕೇಶ್ ಅಂಬಾನಿ ಮಾಲೀಕತ್ವದ ಜಿಯೊ, ಸುನೀಲ್ ಭಾರ್ತಿ ಮಿತ್ತಲ್ ಮಾಲೀಕತ್ವದ ಭಾರ್ತಿ ಏರ್‌ಟೆಲ್‌ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳು 5ಜಿ ಸೇವೆಗಳನ್ನು ಆರಂಭಿಸಲು ಅಗತ್ಯವಿರುವ ತರಂಗಾಂತರಗಳನ್ನು ಹರಾಜಿನ ಮೂಲಕ ಖರೀದಿಸಿವೆ. ಖಾಸಗಿ ನೆಟ್‌ವರ್ಕ್‌ ಸ್ಥಾಪಿಸಲು ಅಗತ್ಯವಿರುವ 5ಜಿ ತರಂಗಾಂತರಗಳನ್ನು ಅದಾನಿ ಸಮೂಹ ಖರೀದಿ ಮಾಡಿದೆ.

Share Post