ಜಹಾಂಗೀರ್ಪುರಿ ಹಿಂಸಾಚಾರ ಪ್ರಕರಣ; ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ
ನವದೆಹಲಿ: ಜಹಾಂಗಿರ್ಪುರಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇಲ್ಲಿ ನಡೆದ ಹಿಂಸಾಚಾರದ ವೇಳೆ ಗುಂಡು ಹಾರಿಸಿದ್ದ ವ್ಯಕ್ತಿಯ ಮನೆಗೆ ಇಂದು ದೆಹಲಿ ಪೊಲೀಸ್ ತನಿಖಾ ತಂಡ ನೀಡಿತ್ತು. ಈ ವೇಳೆ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಲಾಗಿದೆ. ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊ ತುಣುಕೊಂದರಲ್ಲಿ ನೀಲಿ ಅಂಗಿ ಧರಿಸಿದ ವ್ಯಕ್ತಿಯೊಬ್ಬ ಗುಂಡು ಹಾರಿಸುತ್ತಿರುವುದು ಕಂಡುಬಂದಿತ್ತು. ಹೀಗಾಗಿ ಸಿಡಿ ಪಾರ್ಕ್ನಲ್ಲಿರುವ ಆರೋಪಿಯ ನಿವಾಸಕ್ಕೆ ತೆರಳಿ ಶೋಧ ನಡೆಸಲು ತನಿಖಾ ತಂಡ ತೆರಳಿತ್ತು. ಈ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ವಾಯವ್ಯ ದೆಹಲಿ ಡಿಸಿಪಿ ಉಷಾರಾಣಿ ತಿಳಿಸಿದ್ದಾರೆ.
ಆರೋಪಿಯ ಕುಟುಂಬದವರು ತನಿಖಾ ತಂಡದ ಮೇಲೆ ಕಲ್ಲು ತೂರಿದ್ದಾರೆ. ಈ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ತನಿಖೆಗೆ ಅಡ್ಡಿಪಡಿಸಿದ್ದಾರೆ. ಈ ಪ್ರಕರಣದ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ಉಷಾರಾಣಿ ತಿಳಿಸಿದ್ದಾರೆ.ಹನುಮ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಶೋಭಾ ಯಾತ್ರೆ ವೇಳೆ ಜಹಾಂಗಿರ್ಪುರಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು.