ಸಿಡಬ್ಲ್ಯೂಸಿ ಸದಸ್ಯರನ್ನು ನೇಮಿಸುವ ಅಧಿಕಾರ ಖರ್ಗೆಗೆ
ನವ ರಾಯಪುರ; ಕಾಂಗ್ರೆಸ್ ಪಕ್ಷದಲ್ಲಿ ಉನ್ನತ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಹೊಂದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಇಂದು ನಡೆದ ಕಾಂಗ್ರೆಸ್ ಉನ್ನತ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಿಗೆ ಅಧಿಕಾರ ನೀಡುವ ಬಗ್ಗೆ ಅವಿರೋಧ ನಿರ್ಣಯ ಕೈಗೊಳ್ಳಲಾಗಿದೆ.
ಸಿಡಬ್ಲ್ಯುಸಿಗೆ ಚುನಾವಣೆ ನಡೆಸುವ ಕುರಿತಂತೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ಮಾಡಲಾಯ್ತು. ಎಲ್ಲ 45 ಮಂದಿ ಸಮಿತಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಖರ್ಗೆಯವರಿಗೆ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ಅಧಿಕಾರ ನೀಡುವ ನಿರ್ಣಯವನ್ನು ಅವಿರೋಧವಾಗಿ ಕೈಗೊಳ್ಳಲಾಯಿತು.