NationalPolitics

ರಾಷ್ಟ್ರಪತಿ ಚುನಾವಣೆ; ಎನ್‌ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ನಾಮಪತ್ರ

ನವದೆಹಲಿ;  ಎನ್‍ಡಿಎ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡ್‍ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಿದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್‌ ಭವನದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಹಲವು ಕೇಂದ್ರ ಸಚಿವರು, ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಹಲವು ಸಿಎಂಗಳು ಹಾಜರಿದ್ದರು.

 

ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಜೂನ್ 27 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಕಾಂಗ್ರೆಸ್ ನಾಯಕರು ಕೂಡಾ ಹಾಜರಿರಲಿದ್ದಾರೆ.  ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿಗೆ ಆಗಮಿಸುವ ಸಾಧ್ಯತೆಗಳಿವೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈಗಾಗಲೇ ಎನ್‌ಡಿಎ ಜೊತೆ ವೈಎಸ್‌ಆರ್‌ಸಿ, ಬಿಜೆಡಿ ಪಕ್ಷಗಳು ದ್ರೌಪದಿ ಮುರ್ಮುಗೆ ಬೆಂಬಲ ಸೂಚಿಸಿವೆ. ಹೀಗಾಗಿ ದ್ರೌಪದಿ ಅವರು ರಾಷ್ಟ್ರಪತಿಯಾಗೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

Share Post