National

ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ; ಮಧ್ಯಾಹ್ನ ಚುನಾವಣಾ ಆಯೋಗ ಸುದ್ದಿಗೋಷ್ಠಿ

ದೆಹಲಿ; ರಾಷ್ಟ್ರಪತಿ ಚುನಾವಣೆಗೆ ಇಂದು ದಿನಾಂಕ ನಿಗದಿಯಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ. ದೆಹಲಿ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಇಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದ್ದಾರೆ.

ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಅವರ ಆರು ವರ್ಷಗಳ ಅಧಿಕಾರ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಎದುರಾಗಿದೆ. ಜುಲೈ ಮೊದಲ ವಾರದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಎಲ್ಲಾ ರಾಜ್ಯಗಳ ಜನರಿಂದ ಆಯ್ಕೆಯಾಗಿರುವ ಶಾಸಕರು ಈ ಚುನಾವಣೆಯಲ್ಲಿ ಪತ ಚಲಾಯಿಸುವ ಹಕ್ಕು ಹೊಂದಿದ್ದಾರೆ.

 

Share Post