NationalPolitics

ರಾಷ್ಟ್ರಪತಿ ಚುನಾವಣೆ ಮತ ಎಣಿಕೆ; ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಮುನ್ನಡೆ

ನವದೆಹಲಿ; ರಾಷ್ಟ್ರಪತಿ ಚುನಾವಣೆಗೆ ಮತ ಎಣಿಕೆ ಕಾರ್ಯ ಇಂದು ಭರದಿಂದ ಸಾಗುತ್ತಿದೆ. ಈಗಾಗಲೇ ಸಂಸದರ ಮತ ಎಣಿಕೆ ಮುಕ್ತಾಯವಾಗಿದೆ. ಇದರಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಅತ್ಯಧಿಕ ಮತಗಳು ಲಭಿಸಿವೆ. 

 

ದ್ರೌಪದಿ ಮುರ್ಮು ಪರವಾಗಿ 540 ಸಂಸದರು ಮತ ಚಲಾಯಿಸಿದ್ದಾರೆ. ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಪರವಾಗಿ 208 ಸಂಸದರು ಮತ ಚಲಾಯಿಸಿದ್ದಾರೆ. ಈ ಎಲ್ಲಾ ರಾಜ್ಯಗಳ ಶಾಸಕರ ಮತಗಳ ಎಣಿಕೆ ನಡೆಯುತ್ತಿದೆ. ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯೋದು ಬಹುತೇಕ ಖಚಿತ ಎನ್ನಲಾಗುತ್ತಿದೆ.

 

Share Post