NationalPolitics

ರಾಷ್ಟ್ರಪತಿ ಚುನಾವಣೆ; ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಕೆ

ನವದೆಹಲಿ; ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎನ್‍ಸಿಪಿಯ ಶರದ್ ಪವಾರ್, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಆರ್‌ಎಲ್‍ಡಿ ಮುಖ್ಯಸ್ಥ ಜಯಂತ್ ಚೌಧರಿ ಉಪಸ್ಥಿತರಿದ್ದರು.

ಟಿಎಂಸಿ ನಾಯಕರಾಗಿದ್ದ ಯಶವಂತ ಸಿನ್ಹಾ ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಅವರನ್ನು ಘೋಷಣೆ ಮಾಡಿದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಭೆಗಳನ್ನು ನಡೆಸಿ, ಯಶವಂತ ಸಿನ್ಹಾರನ್ನು ಆಯ್ಕೆ ಮಾಡಲಾಗಿತ್ತು. ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‍ಎಸ್) ಕೂಡಾ ಯಶವಂತ ಸಿನ್ಹಾ ಅವರನ್ನು ಬೆಂಬಲಿಸಿದೆ. ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಮತ್ತು ಸಚಿವ ಕೆ.ಟಿ. ರಾಮರಾವ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು. ಯಶವಂತ್ ಸಿನ್ಹಾ ಅವರನ್ನು ಟಿಎಂಸಿ, ಕಾಂಗ್ರೆಸ್, ಸಿಪಿಐ, ಶಿವಸೇನೆ, ಎನ್‍ಸಿಪಿ, ಎಸ್‍ಪಿ, ಡಿಎಂಕೆ, ಆರ್‌ಜೆಡಿ, ಎನ್‍ಸಿ, ಎಐಯುಡಿಎಫ್, ಎನ್‍ಸಿಪಿ, ಆರ್‌ಎಲ್‍ಡಿ, ಪಿಡಿಪಿ ಮತ್ತು ಎಐಎಂಐಎಂ ಪಕ್ಷಗಳು ಬೆಂಬಲಿಸುತ್ತಿವೆ.

Share Post