ಕೇದಾರನಾಥನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ
ಡೆಹ್ರಾಡೂನ್; ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉತ್ತರಾಖಂಡ ಪ್ರವಾಸದಲ್ಲಿರುವ ಮೋದಿ ಹಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಕೇದಾರನಾಥ ದೇಗುಲಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಕೇದಾರನಾಥ ದರ್ಶನದ ನಂತರ ಮೋದಿಯವರು ಬದರಿನಾಥಕ್ಕೆ ಭೇಟಿ ನೀಡಿದರು.
ಎರಡೂ ದೇವಾಲಯಗಳಲ್ಲಿ ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅನಂತರ ಮೋದಿಯವರು ಹೇಮಕುಂಡ್ ಸಾಹಿಬ್ ರೋಪ್ ವೇ ಸೇರಿದಂತೆ ಹಲವು ರಸ್ತೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.