ನಾಳೆ ಪಂಜಾಬ್ ಸಿಎಂ ಭಗವಂತ್ ಮಾನ್ ಮದುವೆ..!!
ಚಂಡೀಗಢ; ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನಾಳೆ ವೈದ್ಯೆಯಾಗಿರುವ ಡಾಗುರುಪ್ರೀತ್ ಕೌರ್ ಅವರನ್ನು ವರಿಸಲಿದ್ದಾರೆ. ಚಂಡೀಗಢದ ತಮ್ಮ ನಿವಾಸದಲ್ಲಿ ಸರಳವಾಗಿ ವಿವಾಹ ನೆರವೇರಲಿದ ಎಂದು ಎಎನ್ಐ ಸುದ್ದಿ ಸಂಸ್ಥೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ. ಈ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಲಿದ್ದಾರೆ.
ಭಗವಂತ್ ಮಾನ್ ಅವರು ಇಂದ್ರಪ್ರೀತ್ ಕೌರ್ ಎಂಬುವವರನ್ನು ಮದುವೆಯಾಗಿದ್ದರು. ಆದ್ರೆ ದಾಂಪತ್ಯದಲ್ಲಿ ವಿರಸ ಉಂಟಾಗಿದ್ದರಿಂದಾಗಿ ಆರು ವರ್ಷದ ಹಿಂದೆ ಇಂದ್ರಪ್ರೀತ್ಗೆ ವಿಚ್ಛೇದನ ನೀಡಿದ್ದರು. ಸದ್ಯ ಇಂದ್ರಪ್ರೀತ್ ಅವರು ಅಮೆರಿಕಾದಲ್ಲಿ ಎರಡು ಮಕ್ಕಳೊಂದಿಗೆ ವಾಸ ಮಾಡುತ್ತಿದ್ದಾರೆ. ಭಗವಂತ್ ಮಾನ್ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಡಾ. ಗುರುಪ್ರೀತ್ ಕೌರ್ ಎಂಬಿಬಿಎಎಸ್ ಪದವೀಧರೆ ಆಗಿದ್ದು, ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.