National

ಪಂಜಾಬ್‌ ಕಾಂಗ್ರೆಸ್‌ನ ಥೀಮ್‌ ಸಾಂಗ್‌ ರಿಲೀಸ್:‌ ಮತ್ತೊಂದು ಅವಕಾಶಕ್ಕಾಗಿ ಮನವಿ

ಪಂಜಾಬ್:‌ ಪಂಜಾಬ್ ವಿಧಾನಸಭಾ ಚುನಾವಣೆಗೆ ಮೂರು ವಾರಗಳ ಮೊದಲೇ ಕಾಂಗ್ರೆಸ್ ಪಕ್ಷವು ತನ್ನ ಥೀಮ್ ಸಾಂಗ್ ಬಿಡುಗಡೆ ಮಾಡಿದೆ. ಈ ಹಾಡಿನ ಮೂಲಕ ಪಂಜಾಬ್ ಜನತೆಗೆ ಎರಡನೇ ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷ ಮನವಿ ಮಾಡಿದೆ. ಕಾಂಗ್ರೆಸ್ ನ ಥೀಮ್ ಸಾಂಗ್ ನಲ್ಲಿ ರಾಜ್ಯ ಸರ್ಕಾರ ಮಾಡುತ್ತಿರುವ ರಸ್ತೆಗಳ ನಿರ್ಮಾಣ, ಹಳ್ಳಿಗಳಲ್ಲಿ ಹೊಸ ಶಾಲೆಗಳ ನಿರ್ಮಾಣ, ವಿದ್ಯುತ್ ದರ ಕಡಿತದಂತಹ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

2 ನಿಮಿಷ, 20 ಸೆಕೆಂಡುಗಳ ಕಾಲ ಪಂಜಾಬಿ ಭಾಷೆಯ ಈ ಹಾಡಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಯುವ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಚರಣ್‌ ಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಇದ್ದಾರೆೀ ಹಾಡನ್ನು ಕಾಂಗ್ರೆಸ್‌ ಪಕ್ಷ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.

ಕಾಂಗ್ರೆಸ್ ಥೀಮ್ ಸಾಂಗ್‌ನಲ್ಲಿ ಸಿಎಂ ಚರಣ್ ಜಿತ್ ಸಿಂಗ್ ಚನ್ನಿನೇ ​​ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಕೂಡ ಹಾಡಿನಲ್ಲಿ ಹಲವೆಡೆ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಪ್ರತಾಪ್ ಸಿಂಗ್ ಬಾಜ್ವಾ ಕೂಡ ಕಣದಲ್ಲಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಘೋಷಿಸಿದ್ದಾರೆ. ಫೆಬ್ರವರಿ 6 ರಂದು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ರಾಹುಲ್ ಗಾಂಧಿ ಘೋಷಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದೆ. ಹಾಗಾದ್ರೆ ನವಜೋತ್ ಸಿಂಗ್ ಸಿಧು ಮತ್ತೊಮ್ಮೆ ಸಿಎಂ ರೇಸ್‌ನಲ್ಲಿ ಹಿಂದುಳಿದಿದ್ದಾರೆಯೇ ಎಂಬ ಪ್ರಶ್ನೆ ಕೂಡ ಕಾಡ್ತಿದೆ.

ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ನಡುವಿನ ಜಟಾಪಟಿ ಜೋರಾಗಿದ್ದು, ಈ ಕಿತ್ತಾಟಗಳು ಪಕ್ಷದ ಗೆಲುವಿನ ಮೇಲೆ ಪರಿಣಾಮ ಬೀರಲಿದೆ ಎಂಬುದು ವಿಶ್ಲೇಷಕರ ಅಭಿಪ್ರಾಯ. ಫೆಬ್ರವರಿ 20 ರಂದು ಪಂಜಾಬ್‌ ವಿಧಾನಸಭಾ ಚುನಾವಣೆ ನಡೆಯಲಿದೆ.

Share Post