National

ಪಂಜಾಬ್‌ ಮಾಜಿ ಸಿಎಂ ಅಮರೀಂದರ್‌ ಸಿಂಗ್‌ಗೆ ತೀವ್ರ ಮುಖಭಂಗ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಪಟಿಯಾಲ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಮರೀಂದರ್‌ ಸಿಂಗ್‌ 13 ಸಾವಿರ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ. ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿ ಅಜಿತ್‌ ಸಿಂಗ್‌ ಕೊಹ್ಲಿ ಅವರು, ಅಮರಿಂದರ್‌ ಸಿಂಗ್‌ ಅವರಿಗೆ ಸೋಲುಣಿಸಿದ್ದಾರೆ.

ಪಟಿಯಾಲ ಕ್ಷೇತ್ರದಲ್ಲಿ ಅಮರಿಂದರ್‌ ಸಿಂಗ್‌ ಹಲವು ದಶಕಗಳಿಂದ ಸ್ಪರ್ಧಿಸುತ್ತಾ ಬಂದಿದ್ದರು. ಆದ್ರೆ ಅದೇ ಕ್ಷೇತ್ರದಲ್ಲಿ ಅವರಿಗೆ ಸೋಲಾಗಿದೆ. ಕಾಂಗ್ರೆಸ್‌ನಿಂದ ಆಯ್ಕೆಯಾಗಿ ಸಿಎಂ ಆಗಿದ್ದ ಅಮರಿಂದರ್‌ ಸಿಂಗ್‌ ಅವರನ್ನು ಕಾಂಗ್ರೆಸ್‌ ಪಕ್ಷ ಅಧಿಕಾರದಿಂದ ಕೆಳಗಿಳಿಸಿತ್ತು. ಇದರಿಂದ ಬೇಸತ್ತು ಪಕ್ಷ ತೊರೆದಿದ್ದ ಅವರು, ಅವರದೇ ಸ್ವಂತ ಪಕ್ಷ ಕಟ್ಟಿದ್ದರು. ಜೊತೆಗೆ ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದರು. ಅಮರಿಂದರ್‌ ಸಿಂಗ್‌ ಹೊಸ ಪಕ್ಷ ಕಟ್ಟಿದ್ದರಿಂದಾಗಿ ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಯಿತು. ಆದ್ರೆ ಸ್ವತಃ ಅಮರೀಂದರ್‌ ಸಿಂಗ್‌ ಅವರು ಮಾತ್ರ ಗೆಲ್ಲಲು ಸಾಧ್ಯವಾಗಲಿಲ್ಲ.

Share Post