National

ಜನರ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ: ಸೋಲಿನ ಪಾಠ ಕಲಿತು ಜನಪರ ಕೆಲಸ ಮಾಡ್ತೇವೆ-ರಾಹುಲ್‌ ಗಾಂಧಿ

ದೆಹಲಿ:  ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಪಕ್ಷವಾಗಿದ್ದ ಕಾಂಗ್ರೆಸ್‌ ಮಕಾಡೆ ಮಲಗಿದೆ. ಉಳಿದ ರಾಜ್ಯಗಳಲ್ಲೂ ʻಹಸ್ತʼ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಜನರ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಎಲ್ಲಾ ವಿಜೇತರಿಗೆ ಅಭಿನಂದನೆಗಳು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಶ್ರಮ ಮತ್ತು ಸಮರ್ಪಣೆಗಾಗಿ ಧನ್ಯವಾದಗಳನ್ನು ಅರ್ಪಿಸಿದರು. ಸೋಲಿನಿಂದ ಪಾಠ ಕಲಿತು ಭಾರತದ ಜನತೆಯ ಹಿತಕ್ಕಾಗಿ ಕೆಲಸ ಮಾಡುತ್ತೇನೆ ಎಂಬ ಮಾತನ್ನು ಹೇಳಿದ್ರು.

ಪಂಜಾಬ್‌ನಲ್ಲಿ ಎಎಪಿ ಗೆದ್ದರೆ ಕಾಂಗ್ರೆಸ್ ಸೋತಿದೆ. ರಾಜ್ಯ ಚುನಾವಣೆಯಲ್ಲಿ ಮತ್ತೊಮ್ಮೆ ಸರ್ಕಾರ ರಚಿಸುವ ಕಾಂಗ್ರೆಸ್ ಕನಸು ನನಸಾಗಿಲ್ಲ. ಕಾಂಗ್ರೆಸ್ ಹೀನಾಯ ಸೋಲಿನತ್ತ ಸಾಗುತ್ತಿದೆ. ಈ ರಾಜ್ಯದಲ್ಲಿ ಆಪ್ ಪಕ್ಷಕ್ಕೆ ಪಟ್ಟಾಭಿಷೇಕ ಮಾಡಿದ್ದಾರೆ. ಈಗಾಗಲೇ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಆಪ್ ಸಿದ್ಧವಾಗಿದೆ. ಎಎಪಿ ಮುಂದೆ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ನಲುಗಿ ಹೋಗಿವೆ.

ಸರಿಯಾದ ಗೇಮ್ ಪ್ಲಾನ್ ಇಲ್ಲದೆ ಕಣಕ್ಕೆ ಇಳಿದ ಕಾಂಗ್ರೆಸ್ ಗೆ ಆಮ್ ಆದ್ಮಿ ಪಕ್ಷ ಬೆವರಿಳಿಸಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೇಳಲಾಗದಷ್ಟು ಹಾನಿ ಮಾಡಿದ್ದಾರೆ ಎಂದು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಅವರು ಕ್ರಿಕೆಟ್‌ನಲ್ಲಿ ಉತ್ತಮ ಆಟಗಾರರಾಗಿರಬಹುದು ಆದರೆ .. ಆದರೆ ರಾಜಕೀಯದಲ್ಲಿ ನವಜೋತ್ ಸಿಂಗ್ ಸಿಧು ಅವರು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಕಡಿಮೆ ಮತ್ತು ಬೆನ್ನಿಗೆ ಚೂರಿ ಹಾಕುವಲ್ಲಿ ಹೆಚ್ಚು ಎಂಬ ಟೀಕೆಗಳಿಗೆ ಗುರಿಯಾಗಿದ್ದಾರೆ.

Share Post