National

ನೈಟ್‌ ಕ್ಲಬ್‌ನಲ್ಲಿ ಕಾಣಿಸಿಕೊಂಡ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ; ವಿಡಿಯೋ ವೈರಲ್‌

ನವದೆಹಲಿ; ಕಠ್ಮಂಡುವಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೈಟ್‌ ಕ್ಲಬ್‌ ಒಂದರಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರೆಂದು ಹೇಳಲಾಗುತ್ತಿದ್ದು, ಅದರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್‌ ಆಗುತ್ತಿದೆ. ಸ್ನೇಹಿತರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾಟ್ಮಂಡುವಿಗೆ ಆಗಮಿಸಿದ್ದ ರಾಹುಲ್‌ ಗಾಂಧಿ, ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ ಸುತ್ತಮುತ್ತಲಿನ ಜನರು ಮದ್ಯ ಸೇವಿಸುತ್ತಿದ್ದ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಕಠ್ಮಂಡು ಪೋಸ್ಟ್‌ನ ವರದಿ ಪ್ರಕಾರ, ರಾಹುಲ್ ಗಾಂಧಿ ಸೋಮವಾರ ಮಧ್ಯಾಹ್ನ ನೇಪಾಳದ ರಾಜಧಾನಿಗೆ ಬಂದಿಳಿದಿದ್ದಾರೆ. ಮ್ಯಾನ್ಮಾರ್‌ನ ಮಾಜಿ ನೇಪಾಳಿ ರಾಯಭಾರಿ ಭೀಮ್ ಉದಾಸ್ ಅವರು ತಮ್ಮ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿಗೆ ಆಹ್ವಾನ ನೀಡಿದ್ದರು ಎಂದು ತಿಳಿದುಬಂದಿದೆ. ‘ಪಪ್ಪು ಜೀ ಪೂರ್ಣಾವಧಿಯ ಪ್ರವಾಸಿಯಾಗಿದ್ದು, ಅರೆಕಾಲಿಕ ರಾಜಕಾರಣಿಯಾಗಿದ್ದಾರೆ. ಅವರ ನಡೆ ಬೂಟಾಟಿಕೆಯಿಂದ ಕೂಡಿದೆ. ರಾಹುಲ್ ಗಾಂಧಿಯವರು ನಕಲಿ ಕಥೆಗಳು ಮತ್ತು ಟೀಕೆಗಳ ಮೂಲಕ ದೇಶದ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಟೀಕಿಸಿದ್ದಾರೆ.

Share Post