CrimeNationalPolitics

ಸುಪ್ರೀಂಕೋರ್ಟ್‌ ಮುಂದೆ ರಾಹುಲ್‌ ರಾಜಕೀಯ ಭವಿಷ್ಯ; ಶುಕ್ರವಾರ ವಿಚಾರಣೆ

ನವದೆಹಲಿ; ಮೋದಿ ಸರ್‌ ನೇಮ್‌ ಅವಹೇಳನ ವಿಚಾರವಾಗಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯಲಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಶುಕ್ರವಾರ ವಿಚಾರಣೆ ನಡೆಸೋದಾಗಿ ಹೇಳಿದ್ದಾರೆ. 

ಎಲ್ಲಾ ಕಳ್ಳರಿಗೂ ಮೋದಿ ಎಂಬ ಉಪನಾಮವಿದೆ ಎಂದು ಕೋಲಾರದಲ್ಲಿ ಚುನಾವಣಾ ಭಾಷಣದಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು. ಇದರ ವಿರುದ್ಧ ಮೋದಿ ಉಪನಾಮವಿರುವ ಬಿಜೆಪಿ ಶಾಸಕರೊಬ್ಬರು ಕೋರ್ಟ್‌ ಮೊರೆ  ಹೋಗಿದ್ದರು. ಸೂರತ್‌ ಕೋರ್ಟ್‌ ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರಿಂದಾಗಿ ರಾಹುಲ್‌ ಗಾಂಧಿಯವರು ಸಂಸತ್‌ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. ಇದನ್ನು ಪ್ರಶ್ನಿಸಿ ಅವರು ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಆದ್ರೆ ಹೈಕೋರ್ಟ್‌, ಸೂರತ್‌ ಕೋರ್ಟ್‌ ಆದೇಶವನ್ನೇ ಎತ್ತಿಹಿಡಿದಿತ್ತು.

ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿಯವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದಾರೆ. ಅವರ ಪರ ವಕೀಲ ಅಭಿಷೇಕ್ ಮನುಸಿಂಘ್ವಿ  ಶುಕ್ರವಾರ ಅಥವಾ ಸೋಮವಾರ ವಿಚಾರಣೆಗೆ ಪಟ್ಟಿ ಮಾಡುವಂತೆ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಿಜೆಐ, ಶುಕ್ರವಾರ ವಿಚಾರಣೆಗೆ ಪಟ್ಟಿ ಮಾಡಲು ಸೂಚನೆ ನೀಡಿದ್ದಾರೆ.

 

Share Post