ರಾಹುಲ್ ಗಾಂಧಿ ವಿಚಾರಣೆ ಅಂತ್ಯ; ಭೋಜನದ ನಂತರ ಮತ್ತೆ ವಿಚಾರಣೆ
ನವದೆಹಲಿ; ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ಅಂತ್ಯವಾಗಿದೆ. ಸತತ ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿ, ಇಡಿ ಕಚೇರಿಯಿಂದ ವಾಪಸ್ ತೆರಳಿದ್ದಾರೆ. ಭೋಜನ ವಿರಾಮದ ನಂತರ ಮತ್ತೆ ರಾಹುಲ್ ವಿಚಾರನೆ ನಡೆಯಲಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದರು. ಇಂದು ಬೆಳಗ್ಗೆ ಪಾದಯಾತ್ರೆ ಮೂಲಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯವರಿಗೆ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ, ವಿಚಾರಣೆಯನ್ನು ಸದ್ಯಕ್ಕೆ ಮುಗಿಸಿದ್ದಾರೆ.