National

ಶಿಮ್ಲಾದಲ್ಲಿ ಮಳೆ ಅವಾಂತರ; ಇದುವರೆಗೆ 71 ಮಂದಿ ಬಲಿ, 7500 ಕೋಟಿ ನಷ್ಟ

ಶಿಮ್ಲಾ; ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದರಿಂದ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆ, ಗಾಳಿಗೆ ಇಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ರೂಪಾಯಿ ಮೌಲ್ಯಾ ಆಸ್ತಿಪಾಸ್ತಿಗಳಿಗೆ ನಷ್ಟವುಂಟಾಗಿದೆ. ಇದುವರೆಗೆ ಸುಮಾರು 71 ಮಂದಿ ಮಳೆಗೆ ಬಲಿಯಾಗಿದ್ದಾರೆ. ಮಾಹಿತಿ ಪ್ರಕಾರ ಮಳೆಯಿಂದಾಗಿ ಶಿಮ್ಲಾದಲ್ಲಿ 7500 ಕೋಟಿ ರೂಪಾಯಿ ಆಸ್ತಿಪಾಸ್ತಿ ನಷ್ಟವುಂಟಾಗಿದೆ ಎಂದು ತಿಳಿದುಬಂದಿದೆ.

ಆಗಸ್ಟ್‌ 13, 14 ಹಾಗೂ 15ರಂದು ಈ ಭಾಗದಲ್ಲಿ ಭಾರಿ ಮಳೆಯಾಗಿದೆ. ಈ ಮೂರು ದಿನಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಹಲವೆಡೆ ಗುಡ್ಡಗಳು ಕುಸಿದಿವೆ. ಮನೆಗಳು ಕೂಡಾ ಕುಸಿದುಬಿದ್ದಿವೆ. ಅವೇಶಷಗಳಡಿ ಜನರು ಸಿಲುಕಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸಾವುನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ತಂಡ, ಜಿಲ್ಲಾಧಿಕಾರಿಗಳು, ಪೊಲೀಸರು, ಸಾರ್ವಜನಿಕರು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಾಗಲೇ 1700ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನೆಲಕ್ಕುರುಳಿವೆ. 9 ಸಾವಿರ ಮನೆಗಳ ಭಾಗಶಃ ಹಾನಿಗೊಳಗಾಗಿವೆ. 2500ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಶಿಫ್ಟ್‌ ಮಾಡಲಾಗಿದೆ.

 

Share Post