ಅಧಿವೇಶನದ ಮೊದಲ ದಿನವೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಾಗುವುದು : ರಾಜನಾಥ್ ಸಿಂಗ್
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ಕೇಂದ್ರ ಸರ್ಕಾರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಉತ್ತರಪ್ರದೇಶದ ಜಾನ್ಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು “ನಾವು ರೈತರನ್ನು ದೇವರೆಂದು ನಂಬಿದ್ದೇವೆ, ಬಿಜೆಪಿ ಸರ್ಕಾರ ರೈತರ ಬಗ್ಗೆ ಸಹಾನುಭೂತಿ ಹೊಂದಿದೆ. ಮೂರು ಕಾನೂನುಗಳ ವಿರುದ್ಧ ಹೋರಾಟ ನಡೆಯಿತು. ಆ ಹಿನ್ನಲೆಯಲ್ಲಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಧಾನಿ ಮೋದಿ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ