National

ಟೈಲರ್‌ ಕನ್ಹಯ್ಯ ಹತ್ಯೆ ಪ್ರಕರಣ; 50 ಲಕ್ಷ ಪರಿಹಾರ ಘೋಷಿಸಿದ ರಾಜಸ್ಥಾನ ಸರ್ಕಾರ

ಜೈಪುರ; ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಭೀಕರ ಹತ್ಯೆ ಮಾಡಿದ ಕೃತ್ಯವನ್ನು ರಾಜಸ್ಥಾನ ವಿಧಾನಸಭೆಯ ಸರ್ವಪಕ್ಷ ಸದಸ್ಯರು ಕಟುವಾಗಿ ಖಂಡಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಕನ್ಹಯ್ಯ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಗೆಹ್ಲೋಟ್‌ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ, ಇದೊಂದು ಭಯೋತ್ಪಾದನೆಯ ಕೃತ್ಯ. ಹಂತಕರಿಗೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆಗಳ ಜೊತೆಗಿರುವ ಸಂಬಂಧಗಳ ಬಗ್ಗೆ ತನಿಖೆ ನಡೆಸಬೇಕು. ವಿಳಂಬ ಮಾಡದೆ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಲಾಗಿದೆ. ರಾಜ್ಯದಲ್ಲಿ ಶಾಂತಿ ಮತ್ತು ಸಂಯಮ ಕಾಪಾಡುವಂತೆ ಮನವಿ ಮಾಡಲಾಗಿದೆ. ಘಟನೆಗೆ ಸಂಬಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ವು ತನಿಖೆ ನಡೆಸುತ್ತಿದೆ. ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಮತ್ತು ರಾಜಸ್ಥಾನ ಪೊಲೀಸ್‌ ಇಲಾಖೆಯ ವಿಶೇಷ ಕಾರ್ಯಾಚರಣಾ ತಂಡ (ಎಸ್‍‌ಒಜಿ)ವು ಎನ್‌ಐಎ ಜೊತೆ ತನಿಖೆಗೆ ಸಹಕರಿಸುತ್ತಿವೆ ಎಂದು ಗೆಹ್ಲೋಟ್‌ ಇದೇ ವೇಳೆ ಹೇಳಿದ್ದಾರೆ.

 

Share Post